ನವದೆಹಲಿ: ಹರಿಯಾಣದ ಗುರುಗ್ರಾಮ್ನ ದೆಹಲಿ-ಜೈಪುರ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಖಾಸಗಿ ಬಸ್ ಗೆ ಬೆಂಕಿ ಕಾಣಿಸಿಕೊಂಡು ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಆರಂಭಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದರೆ, ಇತರ 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಕಾಣಿಸಿಕೊಂಡಿದ್ದು, ಬಸ್ನಿಂದ ಹೆಚ್ಚಿನ ಜ್ವಾಲೆಗಳು ಹೊರಬರುತ್ತಿರುವುದನ್ನು ಮತ್ತು ಹೊಗೆಯು ಗಾಳಿಯಲ್ಲಿ ಏರುತ್ತಿರುವುದನ್ನು ತೋರಿಸುತ್ತದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಇನ್ನೂ ತಿಳಿದುಬಂದಿಲ್ಲ.