alex Certify BREAKING : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು-ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು-ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು-ಲಾರಿ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿ ತಿಮ್ಮಾಪುರ ಗ್ರಾಮದಲ್ಲಿ ಅಪಘಾತ ನಡೆದಿದ್ದು, ಮೃತರು ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳುರು ಮೂಲದ ಬಿ.ಮನೋಹರ್(33) ಹಾಗೂ ಪ್ರಿಯಾಂಕಾ (23) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮೊನಾಲಿಸರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...