alex Certify BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತಿಬ್ಬರು ಬಲಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತಿಬ್ಬರು ಬಲಿ!

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಪ್ರತ್ಯಕ ಅಪಘಾತ ಪ್ರಕರಣಗಳಲ್ಲಿ ಓರ್ವ ಮಹಿಳೆ ಹಾಗೂ ಬೈಕ್ ಸವಾರರೊಬ್ಬರ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯನಗರದ ಗೋವಿಂದರಾಜನಗರದ ಬೈಟು ಕಾಫಿ ಮುಂಭಾಗ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನ ಚಕ್ರ ಬೈಕ್ ಸವಾರ ಕುಮಾರ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಘಟನೆಯಲ್ಲಿ ಅರಕೆರೆಯ ಸಾಯಿ ಗಾರ್ಮೆಂಟ್ಸ್ ಬಳಿ  ರಸ್ತೆದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿ ವೀಣಾ ಎನ್ನುವವರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...