ತುಮಕೂರು : ಕಲ್ಲು ಕ್ವಾರಿಯಲ್ಲಿ ಮದ್ದುಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯಳಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ.
ಹೊಸಹಳ್ಳಿ ಸಮೀಪದ ಕಲ್ಲು ಕ್ವಾರಿಯಲ್ಲಿ ಬಂಡೆ ಒಡೆಯಲು ಮದ್ದು ಇಡಲಾಗಿತ್ತು, ಆದರೆ ಮದ್ದು ಸ್ಪೋಟಗೊಳ್ಳದ ಕಾರಣ ಅದನ್ನು ನಿಷ್ಕ್ರಿಯ ಮಾಡಲು ಏಕಾಏಕಿ ಸ್ಪೋಟಗೊಂಡಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಜುನಾಥ್, ಕೋಟಪ್ಪ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.