alex Certify BREAKING : 2 ವರ್ಷಗಳ ಸರಣಿ ಸುಲಿಗೆ : ಹಾಲು, ವಿದ್ಯುತ್ ದರ ಏರಿಕೆಗೆ H.D ಕುಮಾರಸ್ವಾಮಿ ಆಕ್ರೋಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 2 ವರ್ಷಗಳ ಸರಣಿ ಸುಲಿಗೆ : ಹಾಲು, ವಿದ್ಯುತ್ ದರ ಏರಿಕೆಗೆ H.D ಕುಮಾರಸ್ವಾಮಿ ಆಕ್ರೋಶ.!

ಬೆಂಗಳೂರು : ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ! ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

X   ಖಾತೆಯಲ್ಲಿ ಟ್ವೀಟ್ ಮಾಡಿರುವ ಹೆಚ್ಡಿಕೆ ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’ ಹಾಲು ಹಾಲಾಹಲ; 3ನೇ ಸಲ ದರ ಏರಿಕೆ! ಎಂದು  ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

2023 ಆಗಸ್ಟ್ ₹3 2024 ಜೂನ್ ₹2 2025 ಮಾರ್ಚ್, ಅಂದರೆ ಈಗ ₹4 ವಿದ್ಯುತ್ ಶಾಕ್! ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ. ಇದು ಪ್ರಜಾಪ್ರಭುತ್ವ ಸರಕಾರವಲ್ಲ. ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಕಿಡಿಕಾರಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...