ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಯಲ್ಲಿ ಧ್ವನಿ ಮತದಿಂದ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕರಿಸಲಾಗಿದೆ.
ಮಹತ್ವದ ಬೆಳವಣಿಗೆಯಲ್ಲಿ ಉತ್ತರಾಖಂಡ ವಿಧಾನಸಭೆಯು ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಬುಧವಾರ ಅಂಗೀಕರಿಸಿತು. ಮಂಗಳವಾರ ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಸ್ವಾತಂತ್ರ್ಯದ ನಂತರ ಯಾವುದೇ ರಾಜ್ಯದಲ್ಲಿ ಇಂತಹ ಮೊದಲ ಕ್ರಮ ಇದಾಗಿದೆ.
ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಸ್ಥಾಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಸೂದೆಯನ್ನು ಮಂಡಿಸಿದ್ದರು. ಇದಕ್ಕೆ ಧ್ವನಿಮತದ ಅಂಗೀಕಾರ ನೀಡಲಾಗಿದೆ.