ನವದೆಹಲಿ : ಮಾ.13 ರಂದು ಕೇಂದ್ರ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮಹತ್ವದ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.
ಚುನಾವಣೆ ಘೋಷಣೆ ನಡುವೆಯೇ ಪ್ರಧಾನಿ ಮೋದಿ ಸರ್ಕಾರದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮಹತ್ವದ ಯೋಜನೆ, ಹಲವು ಯೋಜನೆಗಳಿಗೆ ಅನುದಾನ ಘೋಷಿಸುವ ಸಾಧ್ಯತೆಯಿದೆ. ಮಾ.13 ರಂದು ಕೇಂದ್ರ ಸಚಿವ ಸಂಪುಟವು ತನ್ನ ಕೊನೆಯ ಸಭೆಯನ್ನು ನಡೆಸುವ ನಿರೀಕ್ಷೆಯಿದೆ.
ಮೋದಿ ನೇತೃತ್ವದ 2 ನೇ ಸರ್ಕಾರದ ಅವಧಿಯ ಕೊನೆ ಸಚಿವ ಸಂಪುಟ ಸಭೆ ಇದಾಗಿದೆ. ಇನ್ನೂ, ಲೋಕಸಭೆ ಚುನಾವಣೆಗೆ ಮಾ.13 ರಂದು ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ –ಬಿಜೆಪಿ ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿ ಪ್ರಕಟ ಆಗಿದೆ.