ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸಹೋದರಿ ರಾಜೇಶ್ವರಿಬೆನ್ ಶಾ ಸೋಮವಾರ ಮಹಾರಾಷ್ಟ್ರದ ರಾಜಧಾನಿ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು.
ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಗುಜರಾತ್ ನಲ್ಲಿ ಭಾಗವಹಿಸಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಅವರ ಸಹೋದರಿಯ ಸಾವಿನ ದೃಷ್ಟಿಯಿಂದ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ರಾಜೇಶ್ವರಿಬೆನ್ ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕೆಲವು ತಿಂಗಳ ಹಿಂದೆ ಶ್ವಾಸಕೋಶ ಕಸಿಗೆ ಒಳಗಾಗಿದ್ದರು ಎಂದು ವರದಿಯಾಗಿದೆ.
ಅಮಿತ್ ಶಾ ಅವರ ನಿಧನದಿಂದಾಗಿ ಬನಾಸ್ ಡೈರಿ ಮತ್ತು ರಕ್ಷಾ ವಿಶ್ವವಿದ್ಯಾಲಯದಲ್ಲಿ ನಿಗದಿಯಾಗಿದ್ದ ಎರಡು ಕಾರ್ಯಕ್ರಮಗಳನ್ನು ಸಹ ರದ್ದುಪಡಿಸಲಾಗಿದೆ. ಗೃಹ ಸಚಿವರು ಬೆಳಿಗ್ಗೆ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದರು ಎಂದು ವರದಿಗಳು ತಿಳಿಸಿವೆ.