ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗಿದ್ದು, ಇಂದು ಚೆನ್ನೈ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಚೆನ್ನೈನ ಅಪೋಲೋ ಆಸ್ಪತ್ರೆಗೆ ಇಂದು ದಾಖಲಾಗಲಿರುವ ಹೆಚ್.ಡಿ ಕುಮಾರಸ್ವಾಮಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಬರಲಿದ್ದಾರೆ. ಈ ಹಿಂದೆಯೂ ಹೆಚ್ ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ನಿರಂತರವಾಗಿ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ ಆರೋಗ್ಯದ ಬಗ್ಗೆ ನಾಲ್ಕು ದಿನಗಳಿಂದ ಸುದ್ದಿಗಳು ಹರಿದಾಡಿದ್ದವು, ನಂತರ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿದ್ದವು.