ರಾಮನಗರ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮುಂದುವರೆದಿದ್ದು, ಮನನೊಂದು ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ.
ಚನ್ನಪಟ್ಟಣ ತಾಲೂಕಿನ ಮೈಲನಾಯ್ಕನಹಳ್ಳಿ ಗ್ರಾಮದಲ್ಲಿ ಲೀಲಾವತಿ ( 50) ಎಂಬ ಮಹಿಳೆ ಸೂಸೈಡ್ ಮಾಡಿಕೊಂಡಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಿಧ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಸಾಲ ಹಿಂತಿರುಗಿಸುವಂತೆ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.