alex Certify BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ ; ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ ; ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ..!

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿ ನಡೆದಿದೆ.

ತಡರಾತ್ರಿ ಎಣ್ಣೆಪಾರ್ಟಿ ಮಾಡಿದ ಪುಂಡರು ಕ್ಷುಲ್ಲಕ ಕಾರಣಕ್ಕೆ ಕಿರಿಕ್ ತೆಗೆದು ಸ್ನೇಹಿತನ ಮೇಲೆಯೇ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಮೊಬೈಲ್ ನಲ್ಲಿ ಸೆರೆಯಾಗಿದೆ.

ಕೈಗೆ ಸಿಕ್ಕ ರಾಡು, ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸರು ಏಳು ಮಂದಿ ಯುವಕರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...