alex Certify BREAKING NEWS: 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಎಕ್ಸಾಂ ಮುಂದೂಡಿದ ಉತ್ತರ ಪ್ರದೇಶ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಎಕ್ಸಾಂ ಮುಂದೂಡಿದ ಉತ್ತರ ಪ್ರದೇಶ ಸರ್ಕಾರ

ಲಖ್ನೋ: ಉತ್ತರಪ್ರದೇಶದಲ್ಲಿ 10 ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಲು ತೀರ್ಮಾನಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 10 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಅನೇಕ ರಾಜ್ಯಗಳ 10ನೇ ತರಗತಿ ಬೋರ್ಡ್ ಪರೀಕ್ಷೆ, ಸಿಬಿಎಸ್ಇ ಪರೀಕ್ಷೆ ರದ್ದು ಮಾಡಲಾಗಿದೆ.

ಈಗ ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ 2021 ನೇ ಸಾಲಿನ 10 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...