ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಕೆಲವೇ ಕ್ಷಣಗಳಲ್ಲಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ಸತತ 7 ಗಂಟೆ ನಾಗೇಂದ್ರ ಅವರನ್ನು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ನಂತರ ಬಂಧಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಶಾಸಕ ದದ್ದಲ್ ಹಾಗೂ ಪಂಪಣ್ಣ ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ.
ಇನ್ನೊಂದೆಡೆ ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ದದ್ದಲ್ ಅವರ ರಾಯಚೂರು ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ನಾಗೇಂದ್ರ ಬೆನ್ನಲ್ಲೇ ಶಾಸಕ ಬಸನಗೌಡ ದದ್ದಲ್ ಗೂ ಇಡಿ ಸಂಕಷ್ಟ ಶುರುವಾಗಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.