ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸುತ್ತಿದೆ.
ಈ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಕುರಿತು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ರಮೇಶ್ ಎನ್ ಆರ್ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ನಿಗಮದಲ್ಲಿ 187 ಕೋಟಿಗೂ ಹೆಚ್ಚು ಹಣ ದುರುಪಯೋಗವಾಗಿದೆ. ಡೆತ್ ನೋಟ್ ನಲ್ಲಿ ಸಚಿವ ನಾಗೇಂದ್ರ ಹೆಸರು ಉಲ್ಲೇಖವಾಗಿದೆ. ಆದ್ದರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಸದ್ಯ. ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಿಬಿಐ ಎಫ್ಐಆರ್ ದಾಖಲಿಸಿದೆ.ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ.