ಬೆಳ್ತಂಗಡಿ : ವೇಣೂರು ಪಟಾಕಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 4 ನೇ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬೆಂಗಳೂರು ಮೂಲದ ಅನಿಲ್ ಡೇವಿಡ್ ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜ.28ರ ಸಂಜೆ 5.30 ಸುಮಾರಿಗೆ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟವಾಗಿತ್ತು. ಈ ದುರಂತದಲ್ಲಿ ಮೂವರು ಮೃತಪಟ್ಟಿದ್ದರು. ಕೇರಳದ ವರ್ಗೀಸ್ (68), ಹಾಸನದ ಚೇತನ್(25) ಕೇರಳದ ಸ್ವಾಮಿ(60) ಮೃತಪಟ್ಟಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು.