BREAKING : ಹಿರಿಯ ಪತ್ರಕರ್ತ ‘ಸಚ್ಚಿದಾನಂದ ಮೂರ್ತಿ’ ವಿಧಿವಶ

ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ವಿಧಿವಶರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದರು.ಸಚ್ಚಿದಾನಂದಮೂರ್ತಿ ನಿಧನಕ್ಕೆ   ಸಿಎಂ ಸಿದ್ದರಾಮಯ್ಯ  ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ  ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು.

ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ  ಸಂತಾಪ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read