ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಇಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.
ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ತಮ್ಮ ರಾಜೀನಾಮೆಯನ್ನು ಘೋಷಿಸಿದರು. ಪಕ್ಷದ ಆದ್ಯತೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ವಿಭಾಕರ್ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
“ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ವಿಭಾಕರ್ ಶಾಸ್ತ್ರಿ ಟ್ವೀಟ್ ಮಾಡಿದ್ದಾರೆ.
ಅಶೋಕ್ ಚವಾಣ್ ಮತ್ತು ಬಾಬಾ ಸಿದ್ದಿಕಿ ಅವರಂತಹ ಕಾಂಗ್ರೆಸ್ ಘಟಾನುಘಟಿ ನಾಯಕರು ಪಕ್ಷವನ್ನು ತೊರೆದ ಕೆಲವು ದಿನಗಳ ನಂತರ ವಿಭಾಕರ್ ಶಾಸ್ತ್ರಿ ರಾಜೀನಾಮೆ ನೀಡಿದ್ದಾರೆ.