
ಪಾಟ್ನಾ: ಬಿಹಾರದ ಮಾಜಿ ಸಚಿವರ ತಂದೆಯ ಬರ್ಬರ ಕೊಲೆ ಮಾಡಲಾಗಿದೆ. ವಿಕಾಸಶೀಲ್ ಇನ್ಸಾನ್ ಪಾರ್ಟಿ(ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರ ತಂದೆ ಜಿತನ್ ಸಹಾನಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಬಿಹಾರದ ದರ್ಭಾಂಗಾದಲ್ಲಿ ಹತ್ಯೆ ಮಾಡಿದ್ದಾರೆ.
ಸೋಮವಾರ ರಾತ್ರಿ ಅವರ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಕೊಲೆಯಾಗಿರುವ ಸ್ಥಿತಿಯಲ್ಲಿ ಜಿತನ್ ಸಹಾನಿ ಶವ ಪತ್ತೆಯಾಗಿದೆ.