ಕಾರವಾರ : ನಿನ್ನೆ ವಿಧಿವಶರಾಗಿದ್ದ ವೃಕ್ಷಮಾತೆ ‘ತುಳಸಿಗೌಡ’ ಪಂಚಭೂತಗಳಲ್ಲಿ ಲೀನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನೆರವೇರಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ಅವರು ನಿನ್ನೆ ವಿಧಿವಶರಾಗಿದ್ದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅವರ ಅಂತ್ಯಕ್ರಿಯೆ ನೆರವೇರಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ಅವರ ಕೆಲಸವನ್ನು ಕೊಂಡಾಡಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಬಾಲ್ಯವಿವಾಹವಾದ ತುಳಸಿ ಸಹ ಚಿಕ್ಕವಯಸ್ಸಿನಲ್ಲಿಯೇ ಗಂಡನನ್ನು ಕಳೆದುಕೊಂಡು ವಿಧವೆಯಾದರು. ಪರಿಸರ ಪ್ರೇಮ ಎನ್ನುವುದು ಈಕೆಗೆ ಹುಟ್ಟಿನಿಂದ ಬಂದಿತ್ತು. ಊರಿನವರ ಜೊತೆ ಸೌದೆ ತರುವ ಕೆಲಸವನ್ನು ಮಾಡಿ ಪ್ರತಿನಿತ್ಯ ಐದರಿಂದ ಆರು ರೂಪಾಯಿ ದುಡಿಯುತ್ತಿದ್ದರು.