ಕೇರಳ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸುತ್ತಿದೆ. ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಪ್ರತಿಸ್ಪರ್ಧಿಗಳಾದ ಸಿಪಿಐ (ಎಂ) ನ ಸತ್ಯನ್ ಮೊಕೇರಿ ಮತ್ತು ಬಿಜೆಪಿಯ ನವ್ಯಾ ಹರಿದಾಸ್ ವಿರುದ್ಧ 1 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ಅಣ್ಣ ರಾಹುಲ್ ಗಾಂಧಿ ಕ್ಷೇತ್ರಕ್ಕೆ ತಂಗಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲದೇ ಇದು ಪ್ರಿಯಾಂಕಾ ಗಾಂಧಿಯವರಿಗೆ ಮೊದಲ ಚುನಾವಣೆಯಾಗಿದೆ.
ವಯನಾಡ್ ಭೂಕುಸಿತವನ್ನು “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲು ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಯನಾಡ್ ಚುನಾವಣಾ ಪ್ರಚಾರದ ಸಮಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
.