ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತಕ್ಕೀಡಾಗಿದ್ದು, ಅವರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಕೊಲ್ಕತ್ತಾದಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಮಮತಾ ಬ್ಯಾನರ್ಜಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ದಟ್ಟ ಮಂಜಿನ ಹಿನ್ನೆಲೆ ಸರಿಯಾಗಿ ದಾರಿ ಕಾಣದೇ ಇದ್ದರಿಂದ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಈ ಅವಘಡ ನಡೆದಿದೆ. ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ತಲೆಗೆ ಸಣ್ಣ ಗಾಯಗಳಾಗಿದ್ದು, ಅವರನ್ನು ಮತ್ತೆ ಕೋಲ್ಕತ್ತಾಗೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.