ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಐದು ಹೆಚ್ಚುವರಿ ಪೋಕ್ಸೊ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಅನುಮೋದನೆ ನೀಡಿದ್ದು, ಒಟ್ಟು 67 ಕ್ಕೆ ತಲುಪಿದೆ. ಹಣಕಾಸು ಖಾತೆ ರಾಜ್ಯ ಸಚಿವ ಚಂದ್ರಿಮಾ ಭಟ್ಟಾಚಾರ್ಯ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದೆ.ಶ್ಚಿಮ ಬಂಗಾಳದಲ್ಲಿ ಐದು ಹೆಚ್ಚುವರಿ ಪೋಕ್ಸೊ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಅನುಮೋದನೆ ನೀಡಿದ್ದು, ಒಟ್ಟು 67 ಕ್ಕೆ ತಲುಪಿದೆ.
ಡಾರ್ಜಿಲಿಂಗ್ ಸಂಸದ ರಾಜು ಬಿಸ್ತಾ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿದ್ದು, ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಪ್ರಕರಣವನ್ನು ನಿಭಾಯಿಸಿದ ರೀತಿಗೆ ಸಂತ್ರಸ್ತೆಯ ತಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಪತ್ನಿ ಪಶ್ಚಿಮ ಬಂಗಾಳ ಸರ್ಕಾರದ ಅಧಿಕಾರಿಗಳಿಂದ ಸರಿಯಾದ ಅನುಮತಿಯಿಲ್ಲದೆ ಎರಡು ಸ್ಥಿರಾಸ್ತಿಗಳನ್ನು ಖರೀದಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ಹೇಳಿದೆ.