ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸುವ ಮಸೂದೆಯನ್ನು ಇಂದು ಪಶ್ಚಿಮ ಬಂಗಾಳ ಸರ್ಕಾರ ಮಂಡಿಸಿದೆ.
ಕೊಲ್ಕತ್ತಾ ಟ್ರೈನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆಕ್ರೋಶದ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸುವ ಮಸೂದೆಯನ್ನು ಇಂದು ಪಶ್ಚಿಮ ಬಂಗಾಳ ಸರ್ಕಾರ ಮಂಡಿಸಿದೆ.
ಕೋಲ್ಕತಾದ ಆಸ್ಪತ್ರೆಯಲ್ಲಿ 31 ವರ್ಷದ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಸುಮಾರು ಒಂದು ತಿಂಗಳ ನಂತರ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ ((ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ) 2024 ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ.
ಅಧಿಕೃತ ದಾಖಲೆಗಳ ಪ್ರಕಾರ, ಈ ಮಸೂದೆಯು “ಅತ್ಯಾಚಾರದ ಅಪರಾಧವನ್ನು ಮಾಡುವ ಮತ್ತು ಸಾವಿಗೆ ಕಾರಣವಾಗುವ ಅಥವಾ ಮಹಿಳೆಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿರುವಂತೆ ಮಾಡುವ ವ್ಯಕ್ತಿಗಳಿಗೆ” ಮರಣದಂಡನೆ ಶಿಕ್ಷೆ ನೀಡಲು ಪ್ರಯತ್ನಿಸುತ್ತದೆ.