ಬೆಂಗಳೂರು : ಘಾಟಿ ಸುಬ್ರಹ್ಮಣ್ಯದಲ್ಲಿ ರಥದ ಚಕ್ರಕ್ಕೆ ಮಹಿಳೆಯೊಬ್ಬರು ಸಿಲುಕಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವದ ವೇಳೆ ಈ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಥೋತ್ಸವದ ವೇಳೆ ರಥ ಎಳೆಯುವಾಗ ಚಕ್ರದ ಅಡಿಯಲ್ಲಿ ಮಹಿಳೆಯೊಬ್ಬಳು ಸಿಲುಕಿದ್ದಾರೆ. ತಕ್ಷಣ ಪೊಲೀಸರು ಹಾಗೂ ಸಿಬ್ಬಂದಿಗಳು ಮಹಿಳೆಯನ್ನು ಚಕ್ರದಿಂದ ಎಳೆದು ಪಾರು ಮಾಡಿದ್ದಾರೆ . ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.
ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಾಲೂಕಿನ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ16 ರ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನದ ಮುಹೂರ್ತದಲ್ಲಿ ನಡೆದಿದೆ. ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ರಥೋತ್ಸವ ನಡೆದಿದೆ.