ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ತಮ್ಮ ಮೇಲಿನ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ಹೈದರಾಬಾದ್’ನ ಸಂಧ್ಯಾ ಚಿತ್ರಮಂದಿರದಲ್ಲಿ ಡಿಸೆಂಬರ್ 4 ರಂದು ನಡೆದ ಪುಷ್ಪಾ 2: ದಿ ರೂಲ್ ಚಿತ್ರದ ಪ್ರೀಮಿಯರ್ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರೆ, ಅವರ ಒಂಬತ್ತು ವರ್ಷದ ಮಗ ಗಾಯಗೊಂಡಿದ್ದರು. ನಾನು ಮಹಿಳೆ ಕುಟುಂಬಕ್ಕೆ 25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಲು ಬಯಸುತ್ತೇನೆ. ಗಾಯಾಳುಗಳ ವೈದ್ಯಕೀಯ ವೆಚ್ಚಗಳನ್ನು ನಾನೇ ನೋಡಿಕೊಳ್ಳುತ್ತೇವೆ ಎಂದು ಅಲ್ಲು ಅರ್ಜುನ್ ಘೋಷಿಸಿದ್ದರು.