ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ.
ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾದ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಾಳೆಗೆ ಮುಂದೂಡಿದೆ.
ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನ ಭೀತಿ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು.