ಹಾಸನ : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಎಸ್ ಐ ಟಿ ನೋಟಿಸ್ ನೀಡಿದೆ.
ನಾಳೆ ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ ಐ ಟಿ ನೋಟಿಸ್ ನೀಡಿದೆ.
ಹೊಳೆನರಸೀಪುರದ ಭವಾನಿ ರೇವಣ್ಣ ಮನೆಯಲ್ಲೇ ವಿಚಾರಣೆ ನಡೆಯಲಿದ್ದು, ಎಸ್ ಐ ಟಿ ಅಧಿಕಾರಿಗಳು ಮನೆಗೆ ಬಂದು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲೇ ವಿಚಾರಣೆ ನಡೆಸುವುದಾದರೆ ನಾನು ಸಿದ್ದ ಎಂದು ಭವಾನಿ ರೇವಣ್ಣ ಪತ್ರ ಬರೆದಿದ್ದರು.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಬಂಧನಕ್ಕೊಳಗಾಗಿ ಜಾಮೀನು ಪಡೆದುಕೊಂಡಿದ್ದಾರೆ. ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ್ದು, ಇಂದು ಪ್ರಕಟಿಸಲಿದೆ.