![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದಲ್ಲಿ ಬಳಿ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಶಾರಾಣಿ (62) ಮೃತ ಮಹಿಳೆಯಾಗಿದ್ದು,ಘಟನೆಯು ಬೆಳಗಿನ ಜಾವ5.40ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಮಹಾಲಕ್ಷ್ಮಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.