ಬೆಳಗಾವಿ : ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಂಬಂಧಿಕರ ಮನೆಯಲ್ಲಿ ಅಡಗಿ ಕುಳಿತಿದ್ದ ಲಕ್ಕಪ್ಪ ನಾಯಕ್, ಲಕ್ಕವ್ವ ಯಲ್ಲಪ್ಪ ನಾಯಕ್, ಶೋಭಾ ರಾಜಪ್ಪ ಎಂಬ ಮೂವರು ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11 ಕ್ಕೇರಿಕೆಯಾಗಿದೆ.
ಪ್ರಕರಣ ಸಂಬಂಧ 12 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡ ಓರ್ವನಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ವಿಚಾರಗಳಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಬಿಜೆಪಿ ಆರೋಪಿಸಿ ಜಿಲ್ಲಾ ಕೇಂದ್ರಗಳಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದೆ.
ಏನಿದು ಘಟನೆ
ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಹೊರಕ್ಕೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು.
ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 9 ಕ್ಕೇರಿಕೆಯಾಗಿದೆ. ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.