![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಯುವತಿಗೆ ಕೆಎಫ್ ಡಿ ಸೋಂಕು ದೃಢಪಟ್ಟಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ 18 ವರ್ಷದ ಯುವತಿಗೆ ಕೆ ಎಫ್ ಡಿ ಸೋಂಕು ದೃಢಪಟ್ಟಿದ್ದು, ಕೂಡಲೇ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಅನಾರೋಗ್ಯದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಪರೀಕ್ಷಿಸಿದಾಗ ಕೆಎಫ್ ಡಿ ಸೋಂಕು ದೃಢಪಟ್ಟಿರುವುದು ಪತ್ತೆಯಾಗಿದೆ. ಕೂಡಲೇ ಯುವತಿಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.