ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬ್ಯಾಟರಾಯನಪುರದ ಮೈಸೂರು ರಸ್ತೆ ಟೋಲ್ ಗೇಟ್ ಬಳಿ ಅಪರಿಚಿತ ವಾಹನವೊಂದು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಮಹಿಳೆ ಗುರುತು ಲಭ್ಯವಾಗಿಲ್ಲ. ಅಪರಿಚಿತ ವಾಹನವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ ಎಂದು ತಿಳಿದು ಬಂದಿದೆ.