ಕೊಪ್ಪಳ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾದ ಆರೋಪ ಕೊಪ್ಪಳದ ಗಂಗಾವತಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಜ್ಯೋತಿ ಎಂಬ ಮಹಿಳೆಯನ್ನು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಅಲ್ಲದೇ ನರ್ಸಿಂಗ್ ವಿದ್ಯಾರ್ಥಿಗಳಿಂದ ಚಿಕಿತ್ಸೆ ಕೊಡಿಸಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.