ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಸ್ವಲ್ಪ ಮೊದಲು, ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಮಹಿಳಾ ಮೀಸಲಾತಿ ಮಸೂದೆಗೆ ಮೋದಿ ಸರ್ಕಾರ ಅನುಮೋದನೆ ನೀಡಿದೆ.
ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ದೊಡ್ಡ ಸುದ್ದಿ ಬರುತ್ತಿದೆ. ಮೂಲಗಳ ಪ್ರಕಾರ, ಕೇಂದ್ರ ಸರ್ಕಾರ ಇಂದು ಹೊಸ ಸಂಸತ್ ಕಟ್ಟಡದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇದನ್ನು ಸಂಸತ್ತಿನಲ್ಲಿ ಇಂದು ಮಂಡಿಸಲಾಗುತ್ತಿದೆ. ವಿರೋಧ ಪಕ್ಷಗಳಿಂದ ನಿರಂತರ ಬೇಡಿಕೆ ಇತ್ತು. ಈ ಮಸೂದೆ ಕಳೆದ 27 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಕಾಂಗ್ರೆಸ್ ಕೂಡ ಈ ಮಸೂದೆಯನ್ನು ಅಂಗೀಕರಿಸಬೇಕೆಂದು ನಿರಂತರವಾಗಿ ಒತ್ತಾಯಿಸುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಮೋದಿ ಸರ್ಕಾರ ಸದನದಲ್ಲಿ ಅಂಗೀಕರಿಸಲು ಮುಂದಾಗಿದೆ. ಈ