ಬೆಂಗಳೂರು : MLC ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ,ಆದರೆ 4 ಕಾಂಗ್ರೆಸ್ ಎಂಎಲ್ ಸಿಗಳ ಸಾಕ್ಷಿಯನ್ನು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು 4 ಕಾಂಗ್ರೆಸ್ ಎಂಎಲ್ ಸಿಗಳು ಸಾಕ್ಷಿ ಹೇಳಿದ್ದಾರೆ. ಆದರೆ MLC ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ ಎಂದು ಹೇಳಿದ್ದಾರೆ.ಈ ಬಗ್ಗೆ ಯತೀಂದ್ರ, ಉಮಾಶ್ರೀ ಸೇರಿ ನಾಲ್ವರು ಸಾಕ್ಷಿ ಹೇಳಿದ್ದಾರೆ.ಸಂಜೆ 6 ಗಂಟೆ ಸುಮಾರಿಗೆ ಸಿಟಿ ರವಿಯನ್ನು ಅರೆಸ್ಟ್ ಮಾಡಲಾಗಿದೆ ಎಂದಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.ಸದ್ಯ. ಅವರನ್ನು ಪೊಲೀಸರು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಪೊಲೀಸರು ಸಿ.ಟಿ. ರವಿ ಅವರನ್ನು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡು ಹೋಗಲಿದ್ದಾರೆ ಎಂದು ಹೇಳಲಾಗಿದೆ.