alex Certify BREAKING : ಕೋಲಾರದಲ್ಲಿ ಸಾಹಿತಿ ‘ಕೋಟಗಾನಹಳ್ಳಿ ರಾಮಯ್ಯ’ ಮೇಲೆ ಮಾರಣಾಂತಿಕ ಹಲ್ಲೆ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಲಾರದಲ್ಲಿ ಸಾಹಿತಿ ‘ಕೋಟಗಾನಹಳ್ಳಿ ರಾಮಯ್ಯ’ ಮೇಲೆ ಮಾರಣಾಂತಿಕ ಹಲ್ಲೆ, ಆಸ್ಪತ್ರೆಗೆ ದಾಖಲು

ಕೋಲಾರ : ಕೋಲಾರದಲ್ಲಿ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೋಲಾರ ತಾಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಯಿಂದ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಕಣ್ಣಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸದ್ಯ ಕೋಲಾರದ SNR ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಗ್ರಾ.ಪಂ ಸದಸ್ಯನಾಗಿರುವ ಮಂಜುನಾಥ ಮತ್ತು ತೇರಹಳ್ಳಿಯ ಮುನಿಯಪ್ಪ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದುಷ್ಕರ್ಮಿಗಳ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದೇವಸ್ಥಾನವೊಂದರಲ್ಲಿ ಗ್ರಾಮಸ್ಥರಿಗೆ ಕಿರಿಕಿರಿಯಾಗುವಂತೆ ಜೋರಾಗಿ ಮೈಕ್ ಹಾಕಲಾಗಿತ್ತು. ಈ ವೇಳೆ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯನವರು ಮೈಕ್ ಶಬ್ದ ಕಡಿಮೆ ಮಾಡುವಂತೆ ಹೇಳಿದ್ದಾರೆ. ಇಷ್ಟಕ್ಕೇ ಕಿರಿಕ್ ಮಾಡಿದ ಕಿಡಿಗೇಡಿಗಳು ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...