ನವದೆಹಲಿ : ರೈತರ ದೆಹಲಿ ಚಲೋ ಪ್ರತಿಭಟನೆಯಲ್ಲಿ ಮೃತಪಟ್ಟ ಯುವ ರೈತನ ಕುಟುಂಬಕ್ಕೆ ಪಂಜಾಬ್ ಸರ್ಕಾರ ನೆರವಿನ ಹಸ್ತ ಚಾಚಿದೆ.
ಮೃತ ರೈತ ಶುಭ ಕರಣ್ ಸಿಂಗ್ ಕುಟುಂಬಕ್ಕೆ 1 ಕೋಟಿ ಆರ್ಥಿಕ ನೆರವು, ಸೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಸರ್ಕಾರ ಘೋಷಣೆ ಮಾಡಿದೆ.
ಖನೌರಿ ಗಡಿಯಲ್ಲಿ ಹರ್ಯಾಣ ಪೊಲೀಸರ ಜತೆಗಿನ ಸಂಘರ್ಷದ ವೇಳೆ 24 ವರ್ಷ ವಯಸ್ಸಿನ ಶುಭ ಕರಣ್ ಸಿಂಗ್ ಎಂಬ ರೈತ ಮೃತಪಟ್ಟಿದ್ದಾರೆ. ಯುವ ರೈತನ ಸಾವಿನ ಬೆನ್ನಲ್ಲೇ ದೆಹಲಿ ಚಲೋ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಎರಡು ದಿನಗಳ ಕಾಲ ಮಂದಿನ ಕಾರ್ಯಯೋಜನೆ ಬಗ್ಗೆ ನಿರ್ಧರಿಸಿ ಮುಂದುವರಿಸಲಾಗುವುದು ಎಂದು ರೈತ ಸಂಘಟನೆಗಳು ಹೇಳಿದೆ.