ಬೆಂಗಳೂರು : ಪ್ರಿಯಕರನ ಕಣ್ಮುಂದೆಯೇ ಯುವತಿಯ ಮೈ ಮುಟ್ಟಿ ನಾಲ್ವರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಗೆಳೆಯನ ಜೊತೆ ಯುವತಿ ಹೊರಗಡೆ ಹೋದಾಗ ನಾಲ್ವರು ಕಾಮುಕರು ಯುವತಿಯ ಮೈ ಮುಟ್ಟಿ ಕಿರುಕುಳ ನೀಡಿದ ಘಟನೆ ಕೋರಮಂಗಲದಲ್ಲಿ ನಡೆದಿದೆ,
ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಕಾಮುಕರು ಕಿರುಕುಳ ನೀಡಿದ್ದಾರೆ, ಇದನ್ನು ವಿರೋಧ ಒಡ್ಡಿದ ಯುವತಿ ಹಾಗೂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಯುವತಿ ಅಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.