ಮಂಗಳೂರು : ಮಂಗಳೂರಿನ ಸ್ವಿಮ್ಮಿಂಗ್ ಫೂಲ್ ನಲ್ಲಿ ಯುವತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ವಾಸ್ಕೊ ರೆಸಾರ್ಟ್ ನ ಈಜುಕೊಳದಲ್ಲಿ ಮೂವರು ಯುವತಿಯರು ದಾರುಣವಾಗಿ ಮೃತಪಟ್ಟಿದ್ದರು. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ವಿ ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಎಂದು ಗುರುತಿಸಲಾಗಿದೆ.
ಮೈಸೂರು ದೇವರಾಜ ಮೊಹಲ್ಲಾದ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಎಂಡಿ (21) ಹಾಗೂ ಮೈಸೂರು ಕೆಆರ್ ಮೊಹಲ್ಲ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಸ್ (20) ಮೃತಪಟ್ಟ ಯುವತಿಯರು.ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ರೆಸಾರ್ಟ್ಗೆ ಈ ಯುವತಿಯರು ಬಂದಿದ್ದರು. ಭಾನುವಾರ ಸ್ವಿಮ್ಮಿಂಗ್ ಪೂಲ್ನಲ್ಲಿ ಆಡಲು ಯುವತಿಯರು ನೀರಿಗಿಳಿದಿದ್ದಾರೆ. ನಂತರ ಈಜಲು ಬಾರದೇ ಒಬ್ಬರನ್ನು ಒಬ್ಬರು ಕಾಪಾಡಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.