![](https://kannadadunia.com/wp-content/uploads/2022/07/murder.jpg)
ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷದ ದಿನವೇ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಹನುಮಂತನಗರದ 80 ಅಡಿ ರಸ್ತೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ವಿಜಯ್ ಎಂದು ಗುರುತಿಸಲಾಗಿದ್ದು, ವಿಜಯ್ ನನ್ನು ಹತ್ಯೆಗೈದು ರಸ್ತೆಯಲ್ಲೇ ಶವವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ.
ವಿಜಯ್ ಬನಶಂಕರಿ ನಿವಾಸಿಯಾಗಿದ್ದು, ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.