ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿ ವೈ.ಎಸ್.ಶರ್ಮಿಳಾ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಅಧ್ಯಕ್ಷ ಗಿಡುಗು ರುದ್ರ ರಾಜು ಹಸ್ಸಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಹಿನ್ನೆಲೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ ವೈ.ಎಸ್.ಶರ್ಮಿಳಾ ಅವರನ್ನು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರನ್ನು ಮಂಗಳವಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್ಆರ್ಟಿಪಿ) ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಗೆ ಸೇರಿದ್ದರು.