ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಈ ವಾರ ಸಮ್ಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಮದಾಬಾದ್ ನ ಜೈಡಸ್ ಕ್ಯಾಡಿಲಾ ಕಂಪನಿಯ ಕೊರೋನಾ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದೆ. 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ದೊರೆತರೆ ದೇಶದಲ್ಲಿ ಮಕ್ಕಳಿಗೆ ಮೊದಲ ಸಲ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದೆ.
ಜೈಡಸ್ ಕ್ಯಾಡಿಲಾ ಕಂಪನಿಯು ಜೈಕೋವ್ ಡಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ ಕೋರಿ ಜುಲೈ 1 ರಂದು ಅರ್ಜಿ ಸಲ್ಲಿಸಲಾಗಿದೆ.
ಇಂಜೆಕ್ಷನ್ ಬಳಕೆ ಮಾಡದೆ ಚರ್ಮದ ಮೂಲಕ ದೇಹದ ಒಳಗೆ ಲಸಿಕೆ ಸೇರಿಸುವುದು ಈ ಲಸಿಕೆಯ ವಿಶೇಷತೆಯಾಗಿದೆ ಎಂದು ಹೇಳಲಾಗಿದೆ.