ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಜುಲೈ 15 ರವರೆಗೆ ವಿಸ್ತರಿಸಿದೆ.
ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ರೋಸ್ ಅವೆನ್ಯೂ ಕೋರ್ಟ್ ಜುಲೈ 15 ರವರೆಗೆ ವಿಸ್ತರಿಸಿದೆ.
ಫೆಬ್ರವರಿ 26, 2023 ರಂದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ನಂತರ ಇಡಿ ಅವರನ್ನು ಬಂಧಿಸಿತ್ತು. ಸಿಸೋಡಿಯಾ ಅವರು ಫೆಬ್ರವರಿ 28, 2023 ರಂದು ದೆಹಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.