ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
ಸಿಬಿಐ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನವೆಂಬರ್ 10 ಕ್ಕೆ ವಿಚಾರಣೆ ಮುಂದೂಡಿದೆ. ಡಿಕೆ ವಿರುದ್ಧ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ಅವಧಿಯ ಸರ್ಕಾರ ಶಿಫಾರಸು ಮಾಡಿತ್ತು. ಇದೇ ಕೇಸ್ ನಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು. ಇದೀಗ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
ಡಿಕೆ ಶಿವಕುಮಾರ್ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.
2014- 2018ರ ಸಮಯದಲ್ಲಿ ಆಸ್ತಿ ಗಳಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಡಿಕೆಶಿ ವಿರುದ್ಧ ಸಿಬಿಐ ಕೇಸ್ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿಕೆಶಿ ಸಿಬಿಐ ತನಿಖೆ ರದ್ದು ಕೋರಿದ್ದರು.
ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆಪಾದನೆ ಸಂಬಂಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಏಪ್ರಿಲ್ನಲ್ಲಿ ಪೂರ್ಣಗೊಂಡಿತ್ತು. ಕರ್ನಾಟಕ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು.