ಚಿತ್ರದುರ್ಗ: ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಮಲ್ಲೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.
ಸಾಲದ ಮೊತ್ತ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 50,000 ರೂ. ಸಾಲದ ಹಣ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 9,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುರುಜನಹಟ್ಟಿಯ ರಾಕೇಶನಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.