alex Certify ವಧುವಿಗೆ ತಾಳಿ, ಕಾಲುಂಗುರ, ಬಟ್ಟೆ, ವರನಿಗೆ ಪಂಚೆ, ಅಂಗಿ, ಕಲ್ಪವೃಕ್ಷ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಧುವಿಗೆ ತಾಳಿ, ಕಾಲುಂಗುರ, ಬಟ್ಟೆ, ವರನಿಗೆ ಪಂಚೆ, ಅಂಗಿ, ಕಲ್ಪವೃಕ್ಷ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಏಪ್ರಿಲ್ 24ರಂದು ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಸಾಮೂಹಿಕ ವಿವಾಹದಲ್ಲಿ ವಧು-ವರರ ಮದುವೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠದ ವತಿಯಿಂದ ನೀಡಲಾಗುವುದು. ವಧುವಿಗೆ ತಾಳಿ, ಕಾಲುಂಗುರ, ಬಟ್ಟೆ, ವರನಿಗೆ ಅಂಗಿ, ಪಂಚೆ, ಕಲ್ಪವೃಕ್ಷ ನೀಡಲಾಗುವುದು.

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮದುವೆಯಾಗುವ ಆಸಕ್ತ ವಧು-ವರರು ತಮ್ಮ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ, ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಮ್ಮ ಪೋಷಕರ ಜೊತೆ ಬಂದು ಏಪ್ರಿಲ್ 10ರೊಳಗೆ ನೋಂದಣಿ ಮಾಡಿಕೊಳ್ಳಬೇಕಿದೆ.

ಏ. 24ರಂದು ಶ್ರೀ ಕಾಲಭೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ನಡೆಯಲಿದ್ದು, ಇದೇ ಸಂದರ್ಭದಲ್ಲಿ ನಡೆಯುವ ಸಾಮೂಹಿಕ ಉಚಿತ ವಿವಾಹ ಮಹೋತ್ಸವದಲ್ಲಿ 50 ವರ್ಷ ತುಂಬಿದ ಹಿರಿಯ ದಂಪತಿಯನ್ನು ಸನ್ಮಾನಿಸಲಾಗುತ್ತದೆ. ಮಾಹಿತಿಗಾಗಿ 08182 257958, 97428 85627 ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...