alex Certify ಮಗಳ ಮದುವೆ ನೋಡಬೇಕಿದ್ದ ತಂದೆ ಶುಭ ದಿನದಂದೇ ವಿಧಿಯಾಟಕ್ಕೆ ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳ ಮದುವೆ ನೋಡಬೇಕಿದ್ದ ತಂದೆ ಶುಭ ದಿನದಂದೇ ವಿಧಿಯಾಟಕ್ಕೆ ಬಲಿ..!

ಡೆಹ್ರಾಡೂನ್: ಆತ ಖುಷಿಯಿಂದ ಮಗಳ ಮದುವೆ ಫಿಕ್ಸ್ ಮಾಡಿದ್ದರು. ಇನ್ನೇನು ಮದುವೆಗೆ ಒಂದೇ ದಿನ ಬಾಕಿ ಇತ್ತು. ಮೆಹಂದಿ ಸಮಾರಂಭದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ವೇಳೆ ವಿಧಿ ಎಂಟ್ರಿಯಾಗಿತ್ತು. ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಮಗಳ ಮದುವೆ ಕಣ್ತುಂಬಿಕೊಳ್ಳಬೇಕು ಎಂಬ ಆಸೆ, ಕನಸಾಗೇ ಉಳಿಯಿತು.

ಹೌದು, ಉತ್ತರಾಖಂಡದ ಅಲ್ಮೋರಾದಲ್ಲಿ ಈ ಘಟನೆ ನಡೆದಿದೆ. ವಧುವಿನ ಮನೆಯಲ್ಲಿ ಮದುವೆ ಪ್ರಯುಕ್ತ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಧುವಿನ ತಂದೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಏಕಾಏಕಿ ಡ್ಯಾನ್ಸ್ ಫ್ಲೋರ್‌ ಮೇಲೆ ಬಿದ್ದಿದ್ದಾರೆ. ಅಲ್ಲಿದ್ದವರು ಒಂದು ಕ್ಷಣ ಗಲಿಬಿಲಿಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.

ಇನ್ನು ಘಟನೆ ಬಳಿಕ ಪೊಲೀಸರಿಗೆ ವಿಚಾರ ಗೊತ್ತಾಗಿದ್ದು, ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮದುವೆ ನಿಲ್ಲಬಾರದು ಎಂಬ ಕಾರಣಕ್ಕೆ ಘಟನೆ ಮರುದಿನ ತುಂಬಾ ಸರಳವಾಗಿ ಮದುವೆ ಕಾರ್ಯ ನೆರವೇರಿಸಲಾಗಿದೆ. ವಧುವಿನ ಕನ್ಯಾದಾನವನ್ನು ಆಕೆಯ ತಾಯಿಯ ಚಿಕ್ಕಪ್ಪ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...