alex Certify ಭೀಮಾ ನದಿ ಅಬ್ಬರದಿಂದ ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿದ ಆತಂಕ: 7 ಸೇತುವೆ ಮುಳುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಮಾ ನದಿ ಅಬ್ಬರದಿಂದ ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿದ ಆತಂಕ: 7 ಸೇತುವೆ ಮುಳುಗಡೆ

ವಿಜಯಪುರ: ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ.

ಭೀಮಾನದಿಗೆ 1,16,000 ಕ್ಯೂಸೆಕ್ ನೀರು ಬಿಡಲಾಗಿದ್ದು, ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಚಡಚಣ, ಇಂಡಿ, ಆಲಮೇಲ ತಾಲೂಕುಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ನದಿ ಪ್ರವಾಹದಿಂದಾಗಿ 7 ಬ್ಯಾರೇಜ್ ಕಂ ಬ್ರಿಡ್ಜ್ ಗಳು ಮುಳುಗಡೆಯಾಗಿವೆ.

ಗೋವಿಂದಪುರ -ಭಂಡಾರ ಕವಟೆ, ಉಮರಾಣಿ –ಲವಂಗಿ, ಔಜ –ಶಿರನಾಳ, ಹಿಂಗಾಣಿ –ಆಳಗಿ, ಖಾನಾಪುರ –ಪಡನೂರ, ಹಿಳ್ಳ –ಗುಬ್ಬೇವಾಡ, ಚಣೇಗಾಂವ –ಬರೂರು ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಯಾಗಿವೆ. ಇದರಿಂದಾಗಿ ಅನೇಕ ಮಾರ್ಗಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...