ದಾವಣಗೆರೆ: ತಡರಾತ್ರಿ ಸುರಿದ ಭಾರಿ ಮಳೆಗೆ ಸೇತುವೆ ಕುಸಿದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣಿವೆಬಿಳಚಿ ಸಮೀಪ ಭಾರಿ ಮಳೆಯಿಂದಾಗಿ ಸೇತುವೆ ಕುಸಿದು ಬಿದ್ದಿದೆ.
ಇದರಿಂದಾಗಿ ಕಣಿವೆಬಿಳಚಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಗ್ರಾಮಸ್ಥರು ಪರದಾಟ ನಡೆಸುವಂತಾಗಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭದ್ರಾ ಕಾಲುವೆಗೆ ಕಟ್ಟಲಾಗಿದ್ದ ಸೇತುವೆ ಕುಸಿದು ಅವಘಡ ಸಂಭವಿಸಿದೆ.
ಬಸವಪಟ್ಟಣ, ಕಣಿವೆಬಿಳಚಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ರಸ್ತೆಯ ಸೇತುವೆ ಕುಸಿದು ಬಿದ್ದಿರುವುದರಿಂದ ಹತ್ತಾರು ಗ್ರಾಮಗಳ ಜನ ಪರದಾಡುವಂತಾಗಿದೆ.