ಬೆಂಗಳೂರು: ಕಾಂಗ್ರೆಸ್ ನಾಯಕ ಬ್ರಿಜೇಶ್ ಕಾಳಪ್ಪ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದ ವಕ್ತಾರರಾಗಿ ಅವರು ಕಾರ್ಯನಿರ್ವಹಿಸಿದ್ದು, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯಲ್ಲಿ ಅವರು ಆಕಾಂಕ್ಷಿಯಾಗಿದ್ದು, ಪಕ್ಷದ ನಾಯಕರು ತಮ್ಮನ್ನು ಪರಿಗಣಿಸದೇ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.