ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ 10 ಡೌನಿಂಗ್ ಸ್ಟ್ರೀಟ್ ನಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ವಿಷಯಗಳ ಬಗ್ಗೆ ಚರ್ಚಿಸಿದರು.
ಹಿರಿಯ ಅಧಿಕಾರಿಗಳ ಪ್ರಕಾರ, ರಕ್ಷಣೆ, ವ್ಯಾಪಾರ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಮಾತುಕತೆ ನಡೆದಿದೆ . ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿಎ) ಮಾತುಕತೆಗಳ ಪ್ರಗತಿಯ ಬಗ್ಗೆಯೂ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.
ರಾಜನಾಥ್ ಸಿಂಗ್ ಅವರಿಗೆ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್ ಅವರು ವಿದೇಶಾಂಗ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿಯಲ್ಲಿ (ಎಫ್ಸಿಡಿಒ) ಆತಿಥ್ಯ ನೀಡಿದರು. “ಭಾರತ-ಯುಕೆ ಸಂಬಂಧಗಳನ್ನು ಹೆಚ್ಚಿಸುವ ಮತ್ತು ಉಭಯ ದೇಶಗಳ ನಡುವಿನ ಸಹಕಾರವನ್ನು ಆಳಗೊಳಿಸುವ ಬಗ್ಗೆ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್ ಅವರೊಂದಿಗೆ ಒಳನೋಟದ ಚರ್ಚೆಗಳು” ಎಂದು ರಾಜನಾಥ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.